ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ತಾಜ್ ಹೋಟೆಲ್ ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ಹೊರಟ್ಟಿ, ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಯೋಚಿಸಿದ್ದೇನೆ. ಆದರೆ ಕೆಲ ತಾಂತ್ರಿಕ ಸಮಸ್ಯೆಯಿದೆ. ಅದನ್ನು ಸರಿಪಡಿಸಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.
ಅಕ್ಷಯ ತೃತೀಯ; ಬಂಗಾರ ಖರೀದಿಗೆ ಮುಂದಾಗಿದ್ದರೆ ಇಂದಿನ ಚಿನ್ನ-ಬೆಳ್ಳಿ ದರದ ಬಗ್ಗೆ ಇಲ್ಲಿದೆ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ