ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಆಘಾತ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಾವು ಬಿಜೆಪಿ ಸೇರ್ಪಡೆಯಾಗುತ್ತಿರುವ ಬಗ್ಗೆ ಖಚಿತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ಈಗಾಗಲೇ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲರೂ ಪಕ್ಷ ಸೇರ್ಪಡೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.
ಇನ್ನು ನಾನು ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿಯವರಿಗೂ ತಿಳಿಸಿದ್ದೇನೆ. ಅವರು ಒಪ್ಪಿದ್ದಾರೆ. ಅಧಿಕೃತವಾಗಿ ಪಕ್ಷ ಸೇರ್ಪಡೆ ದಿನಾಂಕದ ಬಗ್ಗೆ ಇನ್ನು ನಿಗದಿಯಾಗಿಲ್ಲ. ಈ ಬಗ್ಗೆ ಶೀಘ್ರದಲ್ಲಿ ತಿಳಿಸುವುದಾಗಿ ಹೇಳಿದರು.
ಪಾಕಿಸ್ತಾನ ಸಂಸತ್ ವಿಸರ್ಜನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ