ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸರಿಯಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಲಾಬಿ ನಡೆಯುತ್ತಿದೆ ಈ ಬಗ್ಗೆ ಬಿಜೆಪಿ ಹಿರಿಯ ಮುಖಂಡರೊಬ್ಬರು ನನಗೆ ಹೇಳಿದ್ದಾರೆ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ ಎಂದಿದ್ದಾರೆ. ಆದರೆ ಸಿಎಂ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆ ಸರಿಯಲ್ಲ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದು ಬಿಎಸ್ ವೈ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರಿಗೆ ಇದು ಕೊನೇ ಅವಧಿ ಎಂದರು.
ಇನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿದ್ದರ ಬಗ್ಗೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ದೊಡ್ಡ ಪ್ರಯತ್ನ ನಡೆದಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಾರಾಗಬೇಕೆಂಬ ಬಗ್ಗೆಯೂ ಚರ್ಚೆ ನಡೆದಿದೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಈ ಬೆಳವಣಿಗೆ ಹಿನ್ನಲೆಯಲ್ಲಿ ಭೇಟಿಯಾಗಿರಬಹುದು ಎಂದು ಹೇಳುವ ಮೂಲಕ ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ ಸಾಧ್ಯತೆ ಬಗ್ಗೆ ಹೊರಟ್ಟಿ ಸುಳಿವು ನೀಡಿದ್ದಾರೆ.
ಇನ್ನು ಕೊಲಂಬೋಗೆ ಕುಮಾರಸ್ವಾಮಿ ಜತೆ ಹೋಗಿದ್ದಾಗಿ ಶಾಸಕ ಜಮೀರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಹೊರಟ್ಟಿ, ರಾಜಕೀಯ ಚರ್ಚೆಗೆ ಹೋಗಿರಬಹುದು. ನನ್ನನ್ನು ಕರೆದಿದ್ದರು, ನಾನು ಹೋಗಿಲ್ಲ. ಈ ಬಗ್ಗೆ ಕುಮಾರಸ್ವಾಮಿಯವರು ಸ್ಪಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ