Latest

ಅತಿಥಿ ಉಪನ್ಯಾಸಕರ ಖಾಯಮಾತಿಗಾಗಿ ಪತ್ರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದ 412 ಪದವಿ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು ವಿಸ್ವವಿದ್ಯಾಲಯಗಳ ಧನಸಹಾಯ ಆಯೋಗದ ನಿಯಮಾವಳಿ ಪ್ರಕಾರ ಅತಿಥಿ ಉಪನ್ಯಾಸಕರು ವಿದ್ಯಾರ್ಥತೆ ಹೊಂದಿದ್ದಾರೆ. ಕಳೆದ 2 ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಡಿಮೆ ಸಂಬಳದಲ್ಲಿ ದುಡಿಯುತ್ತಿದ್ದು, ಸೇವಾ ಭದ್ರತೆ ಕೂಡ ಇಲ್ಲದೇ ತೊಂದರೆಗೀಡಾಗಿದ್ದಾರೆ ಹೀಗಾಗಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು. ಹಲವರು ವಯೋಮಿತಿ ಮೀರುತ್ತಿರುವುದರಿಂದ ಅಭದ್ರತೆಗೆ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಎಂದು ಒತ್ತಾಯಿಸಿದ್ದಾರೆ.
ಅನ್ ಲಾಕ್ 2.0: ಸಂಜೆ ಮಹತ್ವದ ನಿರ್ಧಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button