
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ದಿಢೀರ್ ರಾಜೀನಾಮೆ ನೀಡಿದ್ದಾರೆ.
ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಬಸವರಾಜ್ ಹೊರಟ್ಟಿ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎನ್ನಲಾಗಿದ್ದು, ರಾಜೀನಾಮೆ ಪತ್ರ ವೈರಲ್ ಆಗಿದೆ. ಮೇ 1ರೊಳಗೆ ತಮ್ಮ ರಾಜೀನಾಮೆ ಅಂಗೀಕರಿಸುವಂತೆ ಹಾಗೂ ಸಭಾಪತಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದ್ದಾರೆ.
ವೈರಲ್ ಆಗಿರುವ ರಾಜೀನಾಮೆ ಪತ್ರದಲ್ಲಿ ಬಸವರಾಜ್ ಹೊರಟ್ಟಿ ಸಹಿಯಿಲ್ಲ. ಈ ಹಿನ್ನೆಲೆಯಲ್ಲಿ ಹೊರಟ್ಟಿ ರಾಜೀನಾಮೆ ಪತ್ರ ಸಾಕಷ್ಟು ಗೊಂದಲಗಳಿಗೆ ಕಾರಣವಗಿದೆ.