Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಮಧ್ಯ ಕರ್ನಾಟಕ, ಕರಾವಳಿ, ಹಳೆ ಮೈಸೂರು ಭಾಗ ಸೇರಿದಂತೆ 24 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ದಕ್ಷಿಣ ಕನ್ನದ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು,. ಕೊಪ್ಪಳ ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲಿಯೂ ಮಳೆ ಅಬ್ಬರಿಸಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಸಮುದ್ರದಲ್ಲಿ ಬೃಹತ್ ಅಲೆಗಳು ಏಳುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಲಾಗಿದೆ.


Related Articles

Back to top button