ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಗೊತ್ತಾಗಿದೆ.
ಅಧಿಕೃತವಾಗಿ ಘೋಷಣೆ ಇನ್ನೂ ಆಗಬೇಕಿದೆ.
ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ.
ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು.
ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ದಿ.ಎಸ್.ಆರ್.ಬೊಮ್ಮಾಯಿ ಅವರ ಪುತ್ರ. ಜನತಾ ಪರಿವಾರದಲ್ಲಿದ್ದ ಅವರು 2004ರಲ್ಲಿ ಬಿಜೆಪಿ ಸೇರಿದ್ದಾರೆ.
ಬುಧವಾರವೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಸಿಎಂ ರೇಸ್ ಮುಂಚೂಣಿಯಲ್ಲಿ ಬೊಮ್ಮಾಯಿ ಹೆಸರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ