Kannada NewsKarnataka News

27ರಂದು ಬಸವರಾಜ ಕಟ್ಟಿಮನಿ ಪ್ರಶಸ್ತಿ ಪ್ರದಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಹಾಗೂ ಯುವ ಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭ ಡಿ. 27ರಂದು ಬೆಳಗ್ಗೆ 11ಕ್ಕೆ ಇಲ್ಲಿನ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸಭಾಭವನದಲ್ಲಿ ಜರುಗಲಿದೆ.

ಹಿರಿಯ ಪತ್ರಕರ್ತ ಡಾ. ಸರಜೂ ಕಾಟ್ಕರ್ ಅವರಿಗೆ ‘ಬಸವರಾಜ ಕಟ್ಟೀಮನಿ ಪತ್ರಿಕೋದ್ಯಮ ಪ್ರಶಸ್ತಿ’, ಕಪಿಲ್ ಹುಮ್ನಾಬಾದೆ ಮತ್ತು ಶಶಿ ತರಿಕೇರೆ ಅವರಿಗೆ ‘ಯುವ ಸಾಹಿತ್ಯ ಪುರಸ್ಕಾರ’ ನೀಡಿ ಗೌರವಿಸಲಾಗುವುದು.

ಆಕಾಶವಾಣಿ ನಿವೃತ್ತ ನಿರ್ದೇಶಕ ಸಿ.ಯು.ಬೆಳ್ಳಕ್ಕಿ ಅವರು ಪ್ರಶಸ್ತಿ ಪ್ರದಾನ ಮಾಡುವರು. ಹಿರಿಯ ಸಾಹಿತಿ ಡಾ. ಬಸವರಾಜ ಜಗಜಂಪಿ ಅಭಿನಂದನಾ ನುಡಿಗಳನ್ನಾಡುವರು.  ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅಧ್ಯಕ್ಷತೆ ವಹಿಸಲಿದ್ದಾರೆ.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button