
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಬೆಳಗಾವಿ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷರು ಮತ್ತು ಪ್ರಸ್ತುತ ನಿರ್ದೇಶಕರು ಆಗಿದ್ದ ರವಿವಾರ ಪೇಟೆಯ ತೈಲ ವ್ಯಾಪಾರಿ ಬಸವರಾಜ ವಿರುಪಾಕ್ಷಪ್ಪಾ ಝೊಂಡ (68 ವರ್ಷ) ಬುಧವಾರ ಬೆಳಿಗ್ಗೆ ನಿಧನರಾದರು.
ಅವರ ಪಾರ್ಥಿವ ಶರೀರವನ್ನು ಬುಧವಾರ ಸಂಜೆ ಸದಾಶಿವನಗರದ ಕಲಮಠ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಅವರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ, ಸೊಸೆ, ಅಳಿಯ ಮತ್ತು ಒಡಹುಟ್ಟಿದವರನ್ನು ಅಗಲಿದ್ದಾರೆ.
ಅವರ ತಂದೆಯವರೂ ಬಸವೇಶ್ವರ ಬ್ಯಾಂಕಿನ ಅಧ್ಯಕ್ಷ ಹುದ್ದೆಯನ್ನೂ ಅಲಂಕರಿಸಿದ್ದರು. ಅವರು ಮೂರು ಬಾರಿ ಬಸವೇಶ್ವರ ಬ್ಯಾಂಕಿನ ನಿರ್ದೇಶಕರಾಗಿಯೂ ಆಯ್ಕೆಯಾಗಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.