
ಪ್ರಗತಿವಾಹಿನಿ ನ್ಯೂಸ್ , ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭೆ ಬೆಳಗಾವಿ ಜಿಲ್ಲಾ ಘಟಕವು ಬೆಳಗಾವಿ ಗೋವಾವೇಸ್ ನ ಬಸವೇಶ್ವರ ವೃತ್ತದಲ್ಲಿ ನೂತನವಾದ ವಿಶ್ವಗುರು ಬಸವಣ್ಣನವರ 15 ಅಡಿ ಎತ್ತರದ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಿದೆ.
ಮಹಾರಾಷ್ಟ್ರದ ಸೋಲಾಪುರದ ಮೂರ್ತಿಕಾರರು ಬಸವಣ್ಣನವರ ಕಂಚಿನ ಪ್ರತಿಮೆಯನ್ನು ಸಿದ್ಧಗೊಳಿಸುತ್ತಿದ್ದು ಒಪ್ಪಂದದಂತೆ ಮುಂಗಡವಾಗಿ 15 ಲಕ್ಷ ರೂಪಾಯಿಗಳ ಚೆಕ್‌ನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಅಖಿಲ ಭಾರತ ವೀರಶೈವ ಮಹಾಸಭೆಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಘಟಕ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಆಶಾತಾಯಿಕೋರೆ, ನ್ಯಾಯವಾದಿ ಎಂ.ಬಿ.ಜಿರಲಿ ಉಪಸ್ಥಿತರಿದ್ದರು.
ಚಿತ್ರಕಲಾ ಪರಿಷತ್ತಿನಲ್ಲಿ ಕಣ್ಮನ ಸೆಳೆಯಲಿರುವ ‘ಬೆಂಗಳೂರು ಉತ್ಸವ’
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ