Latest

*ತಹಶೀಲ್ದಾರ್ ಕಚೇರಿ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ತಹಶೀಲ್ದಾರ್ ಸಹಿ ನಕಲು ಮಾಡಿದ ಆರೋಪ ಹಿನ್ನೆಲೆಯಲ್ಲಿ ಮಡಿಕೇರಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

Home add -Advt

ಎಫ್ ಟಿಎ ಪ್ರಜ್ವಲ್ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ತೀವ್ರ ಅಸ್ವಸ್ಥಗೊಂಡಿರುವ ಪ್ರಜ್ವಲ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜ್ವಲ್ ವಿರುದ್ಧ ತಹಶೀಲ್ದಾರ್ ಸಹಿ ನಕಲು ಮಾಡಿದ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ವಿಷ ಸೇವಿಸಿ ಅಸ್ವಸ್ಥನಾಗಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಡಿಕೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button