Cancer Hospital 2
Beereshwara 36
LaxmiTai 5

*ಬಿಬಿಎಂಪಿ ಆಯುಕ್ತರಿಗೆ ಡೆಂಗ್ಯೂ ದೃಢ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲಿಯೂ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಮಧ್ಯೆ ಬಿಬಿಎಂಪಿ ಆಯುಕ್ತರಿಗೆ ಡೆಂಗ್ಯೂ ದೃಢ ಪಟ್ಟಿದೆ.

Emergency Service

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ನಾಲ್ಕು ದಿನಗಳಿಂದ ರಜೆಯಲ್ಲಿರುವ ಆಯುಕ್ತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಲ್ಲಿ 1230 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜೂನ್ ತಿಂಗಳಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ 4063 ಜನರ ರಕ್ತದ ಮಾದರಿ ಪರೀಕ್ಷಿಸಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಗ್ಯೂ ಪಾಸಿಟಿವ್ ಕಾಣಿಸಿಕೊಂಡಿದೆ.

Bottom Add3
Bottom Ad 2