ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೃತ್ಯದ ಬಳಿಕ ಪರಾರಿಯಾಗಿದ್ದ ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ಎಂಬುವವರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಹೊರವಲಯದ ಸುಮನಹಳ್ಳಿ ಬಳಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸುಮನಹಳ್ಳಿ ಬಳಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ.
ಓರ್ವ ಪೇದೆ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಮಾಜಿ ಮಹಿಳಾ ಕಾರ್ಪೊರೇಟರ್ ಬರ್ಬರ ಹತ್ಯೆ
ಅಕ್ಕೋಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆಸಚಿವೆ ಶಶಿಕಲಾ ಜೊಲ್ಲೆ ಧಿಡೀರ್ ಭೇಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ