Latest

ಮಾಜಿ ಮಹಿಳಾ ಕಾರ್ಪೊರೇಟರ್ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ನಡೆದಿದೆ.

ಮನೆಯಲ್ಲಿದ್ದ ರೇಖಾ ಅವರನ್ನು ದುಷ್ಕರ್ಮಿಗಳು ಹೊರಬರುವಂತೆ ಕರೆದು ಮನೆ ಮುಂದೆಯೇ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರೇಖಾ ಕದಿರೇಶ್ ಸಾವನ್ನಪ್ಪಿದ್ದಾರೆ.

ರೇಖಾ ಅವರ ಪತಿ ಕದಿರೇಶ್ ಅವರನ್ನು ಕೂಡ 2018ರ ಫೆಬ್ರವರಿ 6ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಲ್ಲೇಶ್ವರಂ ಬಳಿಯ ದೇವಸ್ಥಾನದ ಬಳಿ ಕದಿರೇಶ್ ಮೇಲೆ ದಾಳಿ ನಡೆಸಿದ್ದ ಶೋಭನ್ ಗ್ಯಾಂಗ್ ಮಾರಕಾಸ್ತ್ರಗಳಿಂದ ಅವರನ್ನು ಕೊಚ್ಚಿ ಕೊಲೆಗೈದಿತ್ತು. ಇದೀಗ ರೇಖಾ ಅವರನ್ನು ಕೂಡ ಹತ್ಯೆ ಮಾಡಲಾಗಿದ್ದು, ಇಬ್ಬರು ದುಷ್ಕರ್ಮಿಗಳು ಹತ್ಯೆಮಾಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ, ಕಾಟನ್ ಪೇಟೆ ಪೊಲೀಸರು ಹಾಗೂ ಭೇಟಿ ನಿಡಿ ಪರಿಶೀಲಿಸಿದ್ದಾರೆ.
ಸರ್ಕಾರಿ ಶಾಲೆಗಳ ಆರಂಭಕ್ಕೆ ಸೂಚನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button