Latest

ಇದೊಂದು ರಾಜಕೀಯ ಪ್ರೇರಿತ ಹತ್ಯೆ; ಬಿಜೆಪಿ ಮುಖಂಡನ ಆರೋಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಹಿಂದೆ ರಾಜಕೀಯ ಕೈವಾಡವಿದೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಆರ್.ರಮೇಶ್, ರೇಖಾ ಕದಿರೇಶ್ ಹತ್ಯೆ ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ. ಬಿಬಿಎಂಪಿ ಚುನಾವಣೆ ಮುಂದುಟ್ಟುಕೊಂಡು ಈ ಹತ್ಯೆ ನಡೆಸಲಾಗಿದೆ. ಶಾಸಕ ಜಮೀರ್ ಅಹ್ಮದ್ ಕ್ಷೇತ್ರದಲ್ಲಿ ರಕ್ಷಣೆ ಇಲ್ಲ. ಪೀಟರ್ ಎಂಬಾತನ ಮೇಲೆ ಅನುಮಾನವಿದೆ ಎಂದು ಆರೋಪಿಸಿದ್ದಾರೆ.

Home add -Advt

ಪಾಲಿಕೆ ಚುನಾವಣೆಗೆ ಈಗಾಗಲೇ ನಾವು ರೇಖಾ ಅವರೇ ಅಭ್ಯರ್ಥಿ ಎಂದು ಘೋಷಿಸಿದ್ದೆವು. ಅವರು ಗುಲ್ಲುತ್ತಾರೆ ಎಂಬ ಕಾರಣಕ್ಕೆ ಕೊಲೆ ನಡೆದಿದೆ. ಜಮೀರ್ ಅಹ್ಮದ್ ತಮ್ಮ ಹಿಂಬಾಲಕರ ಮೂಲಕ ಈರೀತಿ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಾಡಿಗಾರ್ಡ್ ಗಳಿಂದಲೇ ಮಾಜಿ ಕಾರ್ಪೊರೇಟರ್ ಹತ್ಯೆ…?

ಮಾಜಿ ಮಹಿಳಾ ಕಾರ್ಪೊರೇಟರ್ ಬರ್ಬರ ಹತ್ಯೆ

Related Articles

Back to top button