Kannada NewsKarnataka NewsLatest

*BBMP ಕಚೇರಿಯಲ್ಲಿ ಬೆಂಕಿ ಅವಘಡ; 10 ಸಿಬ್ಬಂದಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಚೇರಿ ಬಳಿ ಬೆಂಕಿ ಅವಘಡ ಸಂಭವಿಸಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿಯೇ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ 10 ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಬ್ಬಂದಿ ಮುಖ, ಕೈ-ಕಾಲುಗಳಿಗೆ ಸುಟ್ಟಗಾಯಗಳಾಗಿವೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

Home add -Advt

ಗಾಯಾಳು ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬಿಬಿಎಂಪಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಆದೇಶಿಸಿದ ಬಹೆನ್ನಲ್ಲೇ ಸಂಭವಿಸಿದ ಈ ಅವಘಡ ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆಯಲ್ಲಿ ಹಲವು ಫೈಲ್ ಗಳು ನಾಶವಾಗಿವೆ ಎನ್ನಲಾಗುತ್ತಿದೆ.

Related Articles

Back to top button