ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವಿಚಾರಣೆ ನಡೆಸಲು ಅಧಿಕಾರಿಯನ್ನು ನೇಮಕ ಮಾಡಲಾಗಿದೆ.
ಘಟನೆ ಸಂಬಂಧ ತಾಂತ್ರಿಕ ವಿಚಾರಣೆ ನಡೆಸಲು ಪಾಲಿಕೆ ಚೀಫ್ ಇಂಜಿನಿಯರ್ ಇನ್ ಚೀಫ್ ಬಿ.ಎಸ್.ಪ್ರಹ್ಲಾದ್ ಅವರನ್ನು ನೇಮಕ ಮಾಡಲಾಗಿದೆ. ವರದಿಯನ್ನು ಆಗಸ್ಟ್ 31ರೊಳಗೆ ಸಲ್ಲಿಸುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆದೇಶ ನೀಡಿದ್ದಾರೆ.
ಬಿಬಿಎಂಪಿಯ ಗುಣ ನಿಯಂತ್ರಣ ಪ್ರಯೋಗಾಲದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಹಲವು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಪ್ರಕರಣದ ಬಗ್ಗೆ ತನಿಖೆ ಚುರುಕುಗೊಂಡಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮೇಲ್ನೋಟಕ್ಕೆ ಗುಣ ನಿಯಂತ್ರಣ ಪ್ರಯೋಗಾಲದಲ್ಲಿ ಲ್ಯಾಬ್ ಟೆಸ್ಟ್ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ