Kannada NewsKarnataka NewsLatest

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BBMP ARO*

ಮನೆ ಮೇಲೂ ದಾಳಿ

Home add -Advt


ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಂಚ ಪಡೆಯುತ್ತಿದ್ದಗಲೇಬಿಬಿಎಂಪಿ ಎಆರ್ ಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ.

ಚಂದ್ರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಎಆರ್ ಒ. ಖಾತೆ ಮಾಡಿಕೊಡಲು 60,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಂದ್ರಪ್ಪ, ಮುಂಗಡವಾಗಿ 10,000 ರೂಪಾಯಿ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಚಂದ್ರಪ್ಪ ಬಂಧನ ಬೆನ್ನಲ್ಲೇ ಅವರ ಮನೆ ಮೇಲೂ ಲೋಕಾಯುಕ್ತ ಅಢಿಕರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆ ಪತ್ತೆಯಾದ 5 ಲಕ್ಷ ನಗದು ಹಣ, 30X40 ಅಳತೆಯ ಫ್ಲ್ಯಾಟ್, ರಾಣೆಬೆನ್ನೂರು ತಾಲೂಕಿನ 6 ಎಕರೆ ಜಮೀನು ದಾಖಲೆ ಪತ್ರ, ಕೆ.ಆರ್.ಪುರಂ ಕಟ್ಟಡದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

Related Articles

Back to top button