ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2021ರ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದ್ದು, ಸಿಲಿಕಾನ್ ಸಿಟಿ ಜನರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ಹೊಸ ವರ್ಷಾಚರಣೆಗೆ ಡಿಸೆಂಬರ್ 31ರ ಮಧ್ಯ ರಾತ್ರಿ ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಕಿಕ್ಕಿರಿದು ಜನರು ಸೇರುತ್ತಿದ್ದರು. ಸಂಭ್ರಮಾಚರಣೆ ಮುಗಿಲು ಮುಟ್ಟುತ್ತಿತ್ತು. ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದೆ.
ಹೊಸ ವರ್ಷಾಚರಣೆಗೆ ಕಿಕ್ಕಿರಿದು ಜನ ಸೇರುವುದರಿಂದ ಸಾಮಾಜಿಕ ಅಂತರ ಪಾಲನೆ ಕಷ್ಟಸಾಧ್ಯ. ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಹೀಗಾಗಿ ಹೊಸ ವರ್ಷದ ಸಂಭ್ರಮಾಚರಣೆಗೆ ಯಾವುದೇ ರೀತಿಯ ಮೋಜು-ಮಸ್ತಿ, ಪಾರ್ಟಿ ಆಯೋಜನೆಗಳನ್ನು ಮಾಡುವಂತಿಲ್ಲ. ಕಿಕ್ಕಿರಿದು ಜನರು ಸೇರುವಂತಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ