ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಧನರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿದ ಆರೋಪ ಹಿನ್ನೆಲೆಯಲ್ಲಿ ಧನರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿದ್ದ ಕಲ್ಕತ್ ಟ್ಯೂಬ್ ಶಾಪ್ ನಲ್ಲಿ ಪೈಪ್ ಕೊಟೇಷನ್ ಕಡಿಮೆ ಬೆಲೆಗೆ ಕೊಡುವಂತೆ ಕಿರಿಕ್ ಮಾಡಿದ್ದ ಧನರಾಜ್, ಈ ವೇಳೆ ಅಂಗಡಿ ಮಾಲೀಕನ ಸೊಸೆ ಮೇಲೆ ದೌರ್ಜನ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ಪ್ರಕರಣ ಸಂಬಂಧ ಇದೀಗ ಧನರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ