
ಪ್ರಗತಿವಾಹಿನಿ ಸುದ್ದಿ: ಬಿಬಿಎಂಪಿ ಕಸದ ಲಾರಿಗೆ ಅಕ್ಕ-ತಂಗಿ ಇಬ್ಬರೂ ಬಲಿಯಾಗಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯಲ್ಲಿ ನಡೆದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೂ ಹರಿದು ಹೋಗಿದೆ. ಘಟನಾ ಸ್ಥಳದಲ್ಲೇ ಅಕ್ಕ-ತಂಗಿ ಇಬ್ಬರೂ ಮೃತಪಟ್ಟಿದ್ದಾರೆ.
ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ ಇರ್ಫಾನ್ ಮೃತ ದುರ್ದೈವಿಗಳು. ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.