ಪ್ರಗತಿವಾಹಿನಿ ಸುದ್ದಿ: ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಮತ್ತೆ ಬೀಗ ಜಡಿದಿದ್ದಾರೆ.
ಇಂದು ಮುಂಜಾನೆ ಮಂತ್ರಿ ಮಾಲ್ ಗೆ ಆಗಮಿಸಿದ ಬಿಬಿಎಂಪಿ ಅಧಿಕಾರಿಗಳು ಮಾಲ್ ಗೆ ಬೀಗ ಜಡಿದು, ಲೈಸನ್ಸ್ ರದ್ದು ಮಾಡಿದ್ದಾರೆ. 32 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಾಲ್ ಗೆ ಬೀಗ್ ಜಡಿಯಲಾಗಿದೆ.
ಈ ಹಿಂದೆಯೂ ಹಲವು ಬಾರಿ ಪಾಲಿಕೆ ಮಂತ್ರಿ ಮಾಲ್ ಗೆ ಬೀಗ ಹಾಕಿತ್ತು. ಆದರೆ ಮಂತ್ರಿ ಮಾಲ್ ಕೋರ್ಟ್ ನಿಂತ ತಡೆಯಜ್ಞೆ ತಂದಿತ್ತು. ಇದಾದ ಬಳಿಕ ಪಾಲಿಕೆ ಒನ್ ಟೈಂ ಪೇಮೆಂಟ್ ಗೆ ಅವಕಾಶ ಕೊಟ್ಟಿತ್ತು. ಆದರೂ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಇದೀಗ ಮತ್ತೆ ಬೀಗ ಜಡಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ