
ಪ್ರಗತಿವಾಹಿನಿ ಸುದ್ದಿ: ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ಅವರನ್ನು ನೇಮಕ ಮಾಡಲಾಗಿದೆ. ಭಾರತದ ಮಾಜಿ ವೇಗಿ ರೋಜರ್ ಬಿನ್ನಿ ಇನ್ಮುಂದೆ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರೆಯುವುದುಲ್ಲ ಎಂದು ತಿಳಿದುಬಂದಿದೆ.
ಬಿಸಿಸಿಐ ಉಪಾಧ್ಯಕ್ಷರಾಗಿದ್ದ ರಾಜೀವ್ ಶುಕ್ಲಾ ಅವರನ್ನು ಮುಂದಿನ ಚುನಾವಣೆವರೆಗೆ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ರೋಜರ್ ಬಿನ್ನಿ 2022ರ ಅಕ್ಟೋಬರ್ ನಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇದೀಗ ಹಂಗಾಮಿ ಅಧ್ಯಕ್ಷರನ್ನಾಗಿ ರಾಜೀವ್ ಶುಕ್ಲಾ ಅವರನ್ನು ನೇಮಕ ಮಾಡಲಾಗಿದೆ.