Latest

ಮತ್ತೆ ಆಸ್ಪತ್ರೆಗೆ ದಾಖಲಾದ ಸೌರವ್ ಗಂಗೂಲಿ

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಎದೆನೋವಿನಿಂದ ಬಳಲುತ್ತಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೌರವ್ ಗಂಗೂಲಿ ಅವರಿಗೆ ಜಿಮ್ ಮಾಡುವ ವೇಳೆ ಇತ್ತೀಚೆಗೆ ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಸೌರವ್ ಗೆ ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದೆ.

Home add -Advt

ಎದೆನೋವಿನ ಕಾರಣಕ್ಕೆ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Related Articles

Back to top button