
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಹಾಮಾರಿ ಕೊರೊನಾ ಸೋಂಕು ಬಡವ ಬಲ್ಲಿದ ಎನ್ನದೇ ಯಾರನ್ನೂ ಬಿಟ್ಟಿಲ್ಲ. ದೇಶದ ಮೂಲೆ ಮೂಲೆಯಲ್ಲೂ ವ್ಯಾಪಕವಾಗಿ ಹರಡುತ್ತಿರುವ ಸೋಂಕು ಎಲ್ಲರನ್ನೂ ಭಯಭೀತರನ್ನಾಗಿಸಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೂ ಕೊರೊನಾ ಭೀತಿ ಎದುರಾಗಿದ್ದು ಇದೀಗ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.
ಗಂಗೂಲಿ ಹಿರಿಯ ಸಹೋದರ, ಬಂಗಾಳ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷ ಸ್ನೇಹಶಿಶ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ನಿಯಮದಂತೆ ಗಂಗೂಲಿ ಕೂಡ ಹೋಂ ಕ್ವಾರಂಟೈನ್ ಆಗಿದ್ದಾರೆ.
ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸ್ನೇಹಶಿಶ್ ಅವರು ಬೆಲ್ಲೆ ವ್ಯೂವ್ ಕ್ಲಿನಿಕ್ ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಮಧ್ಯೆ ಕೊರೊನಾ ಟೆಸ್ಟ್ ಮಾಡಿದ್ದು, ಇಂದು ವರದಿ ಪಾಸಿಟಿವ್ ಎಂದು ಬಂದಿದೆ.
ಈ ಸಂಬಂಧ ಗಂಗೂಲಿ ಕುಟುಂಬ ಕೂಡ ಮಾಹಿತಿ ನೀಡಿದ್ದು, ಅಣ್ಣ-ತಮ್ಮ ಒಂದೇ ಮನೆಯಲ್ಲಿ ವಾಸವಾಗಿದ್ದರು. ಪ್ರೋಟೋಕಾಲ್ ಪ್ರಕಾರ, ಕೆಲ ದಿನಗಳ ಕಾಲ ಗಂಗೂಲಿ ಹೋಂ ಕ್ವಾರಂಟೈನ್‍ಗೆ ಒಳಗಾಗಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ