
ಪ್ರಗತಿವಾಹಿನಿ ಸುದ್ದಿ: ಬಿಸಿಎಂ ಹಾಸ್ಟೇಲ್ ಗಳಿಗೆ ಸಿದ್ಧಗಂಗಾ ಮಠದ ಅಕ್ಕಿ ಪೂರೈಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಅಮಾನತು ಮಡಲಾಗಿದೆ.
ಗೀತಮ್ಮ ಅಮಾನತುಗೊಂಡವರು. ಬಿಸಿಎಂ ಹಾಸ್ಟೇಲ್ ಗಳಿಗೆ ರಾಜ್ಯ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ ಎಂದು ಸಿದ್ಧಗಂಗಾ ಮಠದಿಂದ ಅಕ್ಕಿಯನ್ನು ಸಾಲವಾಗಿ ಪಡೆದ ಪ್ರಕರನ ಸಂಬಂಧ ಅಧಿಕಾರಿ ಗೀತಮ್ಮ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಕರ್ತವ್ಯಲೋಪ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ.ದಯಾನಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸರಿಯದ ಸಮಯಕ್ಕೆ ಅಕ್ಕಿ ವಿತರಣೆ ಆದರೂ ಕಲ್ಯಾಣಾಧಿಕಾರಿ ಗೀತಮ್ಮ ಹಾಸ್ಟೇಲ್ ಗಳಿಗೆ ಅಕ್ಕಿಯನ್ನು ಎತ್ತುವಳಿ ಮಾಡಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಸಿದ್ಧಗಂಗಾ ಮಠದಿಂದ ಅಕ್ಕಿಯನ್ನು ಸಾಲವಾಗಿ ಪಡೆಯಲಾಗಿತ್ತು. ಮಠದ ಆಡಳಿತಾಧಿಕಾರಿ ವಿಸ್ವನಾಥ್ ಮಠದಿಂದ ಅಕ್ಕಿಯನ್ನು ಸಾಲವಾಗಿ ನೀಡಿದ್ದು ನಿಜ ಎಂದು ಸ್ಪಷ್ಟ ಪಡಿಸಿದ್ದರು, ಇದೀಗ ಪ್ರಕರಣ ಸಂಬಂಧ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ