LatestUncategorized

*BDA ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಡಿಎ-ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

35ಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು ಬೆಂಗಳೂರಿನ ವೈಯ್ಯಾಲಿ ಕಾವಲ್ ನಲ್ಲಿರುವ ಬಿಡಿಎ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ್ದು, ಕಚೇರಿಯ ಎಲ್ಲಾ ಬಾಗಿಲುಗಳನ್ನು ಮುಚ್ಚಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಬಿಡಿಎ ಅವ್ಯವಹಾರದ ಬಗ್ಗೆ ಲೋಕಾಯುಕ್ತಕ್ಕೆ ಹಲವು ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಪೊಲೀಸರ 6 ತಂಡಗಳಿಂದ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ’

ಬಿಡಿಎ ಕಾರ್ನರ್ ಸೈಟ್ ಹಂಚಿಕೆಯಲ್ಲಿ ಗೋಲ್ ಮಾಲ್, ಪರಿಹಾರ ನೀಡುವಲ್ಲಿಯೂ ಅವ್ಯವಹಾರ ನಡೆದುರುವ ಬಗ್ಗೆ ಆರೋಪ, ಲೇಔಟ್ ನಿರ್ಮಾಣದಲ್ಲಿ ಅಕ್ರಮದ ಬಗ್ಗೆ ಅನುಮಾನ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಕಡತ ಪರಿಶೀಲನೆ ನಡೆಸಿದ್ದಾರೆ.

Home add -Advt

*ಬಜೆಟ್ ಅಧಿವೇಶನ ಆರಂಭ; ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ವಿವರಿಸಿದ ರಾಜ್ಯಪಾಲರು*

https://pragati.taskdun.com/karnataka-budget-sessiongovernor-thawar-chand-gehlotspeechvidhanasoudha/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button