Latest

ಬಿಡಿಎ ಕಚೇರಿಯಲ್ಲಿ ಮುಂದುವರೆದ ಪರಿಶೀಲನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮುಖ್ಯ ಕಚೇರಿ ಸೇರಿದಂತೆ ಒಟ್ಟು 5 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

 

ಬಿಡಿಎ ಕಚೇರಿ ಮೇಲಿನ ಎಸಿಬಿ ದಾಳಿ ನಾಲ್ಕನೇ ದಿನವೂ ಮುಂದುವರೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಇಂದು ಬೆಂಗಳೂರಿನಲ್ಲಿ ಮತ್ತೆ ಐದು ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

 

ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿಯಲ್ಲಿ ಎಸಿಬಿ ಡಿವೈ ಎಸ್ ಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಬಿಡಿಎ ಉಪಕಾರ್ಯದರ್ಶಿ ಕಚೇರಿ 4ರಲ್ಲಿಯೂ ಎಸಿಬಿ ಶೋಧ ನಡೆಸಿದೆ. ಈ ವೇಳೆ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

Related Articles

Back to top button