Belagavi NewsBelgaum News
*ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರಿಕೆ: ಪೊಲೀಸ್ ಕಮಿಷನರ್ ವಾರ್ನಿಂಗ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರಿಕೆಯಿಂದ ಪೋಸ್ಟ್ ಮಾಡಿ. ಕಾನೂನು ಸುವ್ಯವಸ್ಥೆ ಕಾಪಾಡಲು ಸೋಶಿಯಲ್ ಮಿಡಿಯಾ ಮೇಲೆ ಪೊಲೀಸರು ನಿಗಾವಹಿಸಿದ್ದಾರೆ ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಎಚ್ಚರಿಕೆ ನೀಡಿದ್ದಾರೆ.
ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿನ್ನೆ ಮಾಳಮಾರುತಿ ಪೊಲೀಸರು ಆರೋಪಿ ಶುಭಂ ಶಳಕೆಯನ್ನು ಅರೆಸ್ಟ್ ಮಾಡಿದ್ದಾರೆ. ಈತನ ಮೇಲೆ ನಗರದ ವಿವಿಧ ಠಾಣೆ ಗಳಲ್ಲಿ 12 ಕೇಸ್ ಗಳಿವೆ. ಈ ಹಿಂದೆಯೇ ಈತನ ಮೇಲೆ ರೌಡಿಶೀಟರ್ ಸಹ ಓಪನ್ ಮಾಡಲಾಗಿದೆ. ಭಾಷಾ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಹಾಕ್ತಿದ್ದಾರೆ. ಯಾರೇ ಸಾಮಾಜಿಕ ಜಾಲತಾಣದಲ್ಲಿ ದೊಂಬಿ ಸೃಷ್ಟಿಸಲು ಯತ್ನಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಾಗ ಎಚ್ಚರಿಕೆ ಇರಲಿ ಎಂದು ವಾರ್ನಿಂಗ್ ನೀಡಿದ್ದಾರೆ.