Belagavi NewsBelgaum NewsKannada NewsKarnataka NewsLatest
*ನಂಬರ್ ಪ್ಲೇಟ್ ಇಲ್ಲದೆ ವಾಹನ ಚಲಾಯಿಸಿದರೆ ಎಚ್ಚರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ನಂಬರ ಪ್ಲೇಟ್ ಇಲ್ಲದ ಹಾಗೂ ದೋಷಪೂರಿತ ನಂಬರ ಪ್ಲೇಟ್ ಅಳವಡಿಸಿಕೊಂಡು ಸಂಚರಿಸುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಒಟ್ಟು 126 ದ್ವಿಚಕ್ರ ವಾಹನಗಳ ವಿರುದ್ಧ ಮೋಟಾರು ವಾಹನ ಕಾಯ್ದೆ 1988 ರ ಕಲಂ: 177 ರಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ರೂ.63,000 ಗಳ ದಂಡ ವಿಧಿಸಿ ಸದರಿ ವಾಹನಗಳ ನಂಬರ ಪ್ಲೇಟಗಳನ್ನು ಸ್ಥಳದಲ್ಲಿಯೇ ಸರಿಪಡಿಸಲಾಗಿರುತ್ತದೆ.

ಬೆಳಗಾವಿ ನಗರದ ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ ತಮ್ಮ ವಾಹನಗಳಿಗೆ ನಿಗದಿತ ಮಾದರಿಯ ನಂಬರ ಪ್ಲೇಟ್ಗಳನ್ನು ಅಳವಡಿಸಿಕೊಂಡು ಸಂಚರಿಸುವಂತೆ ನಗರ ಪೊಲೀಸ್ ಆಯುಕ್ತರು ಎಚ್ಚರಿ ನೀಡಿದ್ದಾರೆ.



