Kannada News

ವಾಹನ ಸವಾರರೇ ಹುಷಾರ್, ಬೆಳಗಾವಿಯಲ್ಲಿ ಒಂದೇ ದಿನ 50 ಜನರ ಮೇಲೆ ಕೇಸ್!

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೆಚ್ಚುತ್ತಿರುವ ವಾಹನ ಅಪಘಾತ ತಡೆಯಲು ಪೊಲೀಸ್ ಇಲಾಖೆ ತೀವ್ರ ಕಾರ್ಯಾಚರಣೆ ಆರಂಭಿಸಿದೆ. ಜಿಲ್ಲಾದ್ಯಂತ ಕುಡಿದು ವಾಹನ ಚಲಾಯಿಸುವವರ ವಿರುದ್ಧ ಭಾನುವಾರದಿಂದ ಕ್ರಮ ಆರಂಭವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 50 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯ ಎಲ್ಲೆಡೆ ನಿರಂತರವಾಗಿ ಕುಡಿದು ವಾಹನ ಚಲಾಯಿಸುವವರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಆದೇಶಿಸಿದ್ದಾರೆ. ಮೊದಲ ದಿನವೇ 50ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ.

Home add -Advt

ಜಿಲ್ಲೆಯ ಎಲ್ಲೆಡೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

https://pragati.taskdun.com/a-total-of-18-bjp-mlas-including-3-from-belgaum-are-afraid-of-losing-tickets/

Related Articles

Back to top button