Latest

ಶೈಕ್ಷಣಿಕ ಪ್ರಗತಿಗೆ ಹೊಸ ಕ್ರಾಂತಿಕಾರಕ ಪ್ರಯತ್ನಗಳಾಗಲಿ : ಸಚಿವ ರೇವಣ್ಣ

ಶೈಕ್ಷಣಿಕ ಪ್ರಗತಿಗೆ ಹೊಸ ಕ್ರಾಂತಿಕಾರಕ ಪ್ರಯತ್ನಗಳಾಗಲಿ : ಸಚಿವ ರೇವಣ್ಣ

ಜಿಲ್ಲೆಯಲ್ಲಿ ಗುಣಮಟ್ಟದ ಶೈಕ್ಷಣಿಕ ಪ್ರಗತಿಗೆ ಹೊಸ ಕ್ರಾಂತಿಕಾರಕ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ ಮುಂದಿನ ದಿನಗಳಲ್ಲಿ ಇದು ಸರ್ಕಾರಿ ಶಾಲಾ- ಕಾಲೇಜುಗಳಿಗೆ ಹೆಚ್ಚಿನ ಮನ್ನಣೆ ದೊರೆಕಿಸಿ ಕೊಡಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿ – ಹಾಸನ : ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲಾ ಸರ್ಕಾರಿ ಶಾಲೆಗಳ 10 ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಸ್ಮಾರ್ಟ್‍ಕ್ಲಾಸ್‍ಗಳು ಪ್ರಾರಂಭವಾಗಲಿವೆ ಅಲ್ಲದೆ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳ ಬಗ್ಗೆ ವಿಶೇಷ ತರಗತಿಗಳನ್ನು ನಡೆಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ತಯಾರು ಮಾಡುವುದು ಎಂದು ಸಚಿವರು ಹೇಳಿದರು.

ಎಲ್ಲಾ ಸರ್ಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಸರ್ಕಾರದ ವತಿಯಿಂದಲೇ ವಿಶೇಷವಾಗಿ ಸಿ.ಇ.ಟಿ ತರಬೇತಿ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ ಯಾವುದೇ ಖಾಸಗಿ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟಕ್ಕೆ ಕಡಿಮೆ ಇಲ್ಲದಂತೆ ಜಿಲ್ಲೆಯಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಾಮಾಥ್ರ್ಯಗಳನ್ನು ಕಟ್ಟಿ ಬೆಳೆಸುವುದಾಗಿ ಸಚಿವ ರೇವಣ್ಣ ಅವರು ತಿಳಿಸಿದರು.

ಹಾಸನ ನಗರದ 4 ಕಡೆ 1-12 ನೇ ತರಗತಿಯವರೆಗೆ ಸರ್ಕಾರಿ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಮೊಸಳೆ ಹೊಸಹಳ್ಳಿಯಲ್ಲಿ ಡಿಪ್ಲಮೋ ಕಾಲೇಜಿನ ಎಲ್ಲಾ 360 ಸೀಟ್‍ಗಳು ಭರ್ತಿಯಾಗಿವೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಶೈಕ್ಷಣಿಕ ಪ್ರಗತಿಯನ್ನು ಸಾರ್ವಜನಿಕರು ಗುರುತಿಸಬಹುದಾಗಿದೆ ಎಂದು ಲೋಕೋಪಯೋಗಿ ಸಚಿವರು ಹೇಳಿದರು.

ಹಾಸನ ನಗರದಲ್ಲಿ ವಾಸಿಸುತ್ತಿರುವ ಕಡು ಬಡವ ವಸತಿ ರಹಿತರಿಗೆ 3000 ನಿವೇಶನ ಹಂಚಿಕೆ ಮಾಡಲು ವಿವಿಧ ಕಡೆಗಳಲ್ಲಿ 30 ಎಕರೆ ಜಾಗ ಗುರುತಿಸಲಾಗಿದೆ. ನಗರಸಭೆ, ನಗರಾಭಿವೃದ್ದಿ ಪ್ರಾಧಿಕಾರ ಮತ್ತು ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ನಿವೇಶನಕ್ಕೆ ಮಂದಿರ/ ಮಸೀದಿ, ಶಾಲೆ ಆಸ್ಪತ್ರೆಗಳಿಗೂ ಜಾಗ ಮೀಸಲಿರಿಸಿ ವ್ಯವಸ್ಥಿತವಾಗಿ ಬಡಾವಣೆಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಅವರು ತಿಳಿಸಿದರಲ್ಲದೆ ಅತ್ಯಂತ ತಳಮಟ್ಟದ ಕೆಲಸ ಮಾಡುತ್ತಿರುವವರಿಗೆ ಮೊದಲ ಆಧ್ಯತೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಗಾಗಲೇ ನಗರದ 35 ವಾರ್ಡ್‍ಗಳಿಂದ 10000 ಮಂದಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಅವುಗಳನ್ನು ಆದ್ಯತೆ ಮೇರೆಗೆ ವರ್ಗಿಕರಿಸಿ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕವಾಗಿ ಲಾಟರಿ ಮೂಲಕ ಹಂಚಿಕೆ ಮಾಡಲಾಗುವುದು ಹಾಗಾಗಿ ಯಾರೂ ಕೂಡ ಮದ್ಯವರ್ತಿಗಳನ್ನು ನಂಬಿ ಹಣ ಕಳೆದುಕೊಳ್ಳಬಾರದು ಎಂದು ಸಚಿವರು ಹೇಳಿದರು.

ಹಾಸನ ನಗರಸಭೆ ವ್ಯಾಪ್ತಿಯಲ್ಲಿ ಕಂದಾಯ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ 2114 ಮಂದಿ ಅವುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ್ದು ಅವುಗಳನ್ನು ನಿಯಾಮಾನುಸಾರ ಪರಿಗಣಿಸಿ ಹಕ್ಕುಪತ್ರ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ನಗರ ಹಾಗೂ ಹೊರವಲಯದಲ್ಲಿ ಅನಧಿಕೃತ ಲೇಔಟ್‍ಗಳ ಅಭಿವೃದ್ದಿ ಪಡಿಸುವವರ ಬಗ್ಗೆ ನಿಯಾಮಾನುಸಾರ ಕ್ರಮ ಕೈಗೊಳ್ಳಲು ತಹಸೀಲ್ದಾರ್‍ರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ನಗರ ಜಿಲ್ಲಾ ಕ್ರೀಡಾಂಗಣ, ಹಾಗೂ ಸರ್ಕಾರಿ ಕಟ್ಟಡಗಳ ಆವರಣದಲ್ಲಿ ಹಲವರು ರಾತ್ರಿ ಮದ್ಯಪಾನ ಮಾಡಿ ಬಾಟಲಿಗಳನ್ನು ಓಡೆದು ಅಸಭ್ಯವಾಗಿ ವರ್ತಿಸುತ್ತಿರುವುದರ ಬಗ್ಗೆ ದೂರುಗಳು ಕೇಳಿ ಬಂದಿದ್ದು ಡಿ.ವೈಎಸ್‍ಪಿ, ವೃತ್ತ ನಿರೀಕ್ಷಕರು, ಸಬ್ ಇನ್ಸ್‍ಪೆಕ್ಟರ್‍ಗಳು, ಅಬಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ಹರಿಸಿ ಗಸ್ತು ವ್ಯವಸ್ಥೆ ಮಾಡುವಂತೆ ಅವರು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರಲ್ಲದೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಲು ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದೂ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಸ್ಮಾರ್ಟ್‍ಕ್ಲಾಸ್ ವ್ಯವಸ್ಥೆ ಹಾಗೂ ಜಿಲ್ಲೆಯಲ್ಲಿ ಗುಣಾತ್ಮಕ ಶೈಕ್ಷಣಿಕ ಅಭಿವೃದ್ದಿಗೆ ಕೈಗೊಂಡಿರುವ ವಿಶೇಷ ಕ್ರಮಗಳ ಬಗ್ಗೆ ವಿವರಿಸಿದರು.////

Web Title : Be it new revolutionary efforts for academic progress Says Minister Revanna

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button