Kannada NewsKarnataka NewsLatest

*ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎದೆಗೆ ಗುಂಡು ಹಾರಿಸಿಕೊಂಡು ಬಿಇ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಭವಾನಿ ನಗರದಲ್ಲಿ ಈ ದುರಂತ ಸಂಭವಿಸಿದೆ. ವಿಶು ಉತ್ತಪ್ಪ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ತಂದೆಯ ಗನ್ ನಿಂದಲೇ ಫೈರ್ ಮಾಡಿಕೊಂಡು ವಿಶು ಸಾವನ್ನಪ್ಪಿದ್ದಾನೆ. ಕೊಡಗು ಮೂಲದ ತಮ್ಮಯ್ಯ ಎಂಬುವವರ ಪುತ್ರ ಮೃತ ವಿದ್ಯಾರ್ಥಿ. ತಮ್ಮಯ್ಯ ನೈಸ್ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದರು. ಕಳೆದ 15 ವರ್ಷಗಳಿಂದ ಮಾದನಾಯಕನಹಳ್ಳಿಯಲ್ಲಿ ವಾಸವಾಗಿದ್ದರು.

ತಂದೆ ರೇಷನ್ ತರಲು ಹೋದಾಗ ತಂದೆಯ ಗನ್ ನಿಂದಲೇ ಗುಂಡು ಹಾರಿಸಿಕೊಂಡು ಬಳಿಕ ತಂದೆಗೆ ಕರೆ ಮಾಡಿ ತಾನು ಇನ್ಮುಂದೆ ತಪ್ಪು ಮಾಡಲ್ಲ ಹೇಳಿದ್ದಾನೆ. ಗಾಬರಿಯಾದ ತಂದೆ ಮನೆಗೆ ಬಂದು ನೋಡುವಷ್ಟರಲ್ಲಿ ಮಗ ವಿಶು ರಕ್ತದ ಮಡುವಲ್ಲಿ ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪಿದ್ದಾನೆ.

Home add -Advt

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button