Karnataka News

*ಮತ್ತೋರ್ವ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಘಟನೆ ಮಾಸುವ ಮುನ್ನವೇ ಅದೇ ಕಾಲೇಜಿನ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಯಶ್ವಂತ್ (20) ಆತ್ಮಹತ್ಯೆ ,ಮಾಡಿಕೊಂಡಿರುವ ವಿದ್ಯಾರ್ಥಿ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ.

ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯಶ್ವಂತ್ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button