*ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ; ಜಿಪಂ ಸಿಇಓ ಹರ್ಷಲ್ ಭೋಯರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಗ್ರಾಮ ಪಂಚಾಯಿತಿ ಮತ್ತು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಗಳ ಜವಾಬ್ದಾರಿವಾಗಿರುತ್ತದೆ. ಬೇಸಿಗೆಯಾಗಿರುವ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಯಾವುದೇ ಗ್ರಾಮದಲ್ಲಿ ಕೂಡ ನೀರಿನ ಸಮಸ್ಯೆಗಳು ಉದ್ಭವಿಸಿದಂತೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಕುರಿತು ಭಾನುವಾರ (ಏ.9) ನಡೆದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಿಲ್ಲಾ ಮತ್ತು ತಾಲೂಕ ಅಧಿಕಾರಿಗಳು ಮತ್ತು ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕ ಅಧಿಕಾರಿಗಳು ಶುದ್ಧೀಕರಣ ಕುಡಿಯುವ ನೀರಿನ ಘಟಕದ ನೀರಿನ ಸಂಸ್ಕರಣಾ ಘಟಕದ ಸುತ್ತಲೂ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.ನೀರಿನ ಸಂಸ್ಕರಣಾ ಘಟಕದ ಪ್ರಮುಖ ಭಾಗಗಳಾದ ಫಿಲ್ಟರ್,ಕ್ಲೋರಿನೀಕರಣ ಬಾಟಲ್ ಇತ್ಯಾದಿಗಳನ್ನು ಕಾಲಕಾಲಕ್ಕೆ ಬದಲಾಯಿಸಬೇಕು ಮತ್ತು ನೀರಿನ ಸಂಸ್ಕರಣಾ ಘಟಕವನ್ನು ನಿಯಮಿತವಾಗಿ ಬ್ಯಾಕ್ ವಾಶ್ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಬಹುಗ್ರಾಮ ಕುಡಿಯುವ ನೀರು ಯೋಜನೆಯ ಮುಖಾಂತರ ಡ್ಯಾಮ್ ಗಳಿಂದ ಪ್ರತಿನಿತ್ಯ ಎಷ್ಟು ನೀರು ಸರಬರಾಜು ಆಗುತ್ತದೆ ಎಂಬುದರ ಬಗ್ಗೆ ಪ್ರತ್ಯೇಕವಾಗಿ ಪರಿಶೀಲಿಸಿ ಕಾರ್ಯಪಾಲಕ ಅಭಿಯಂತರ ಮತ್ತು ಸಹಾಯಕ ಕಾರ್ಯ ಪಾಲಕ ಅಭಿಯಂತರರು ವರದಿಯನ್ನು ಸಲ್ಲಿಸಬೇಕೆಂದು ತಿಳಿಸಿದರು.
ಪ್ರತಿದಿನ ಗ್ರಾಮ ಪಂಚಾಯಿತಿಗಳಲ್ಲಿ ಸರಿಯಾಗಿ ನೀರು ಪೂರೈಕೆ ಆಗುತ್ತಿರು ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿ ಕಡೆ ಮಾಹಿತಿಯನ್ನು ತೆಗೆದುಕೊಳ್ಳಬೇಕು ಇಲಾಖೆಗೆ ಮತ್ತು ತಹಶೀಲ್ದಾರ್ ಅವರ ಜೊತೆಗೆ ಈ ವಾರದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕಾಲಕಾಲ ತಕ್ಕಂತೆ ಕುಡಿಯುವ ನೀರಿನ ಸಂಬಂಧ ಪಟ್ಟಂತೆ ಸಭೆಯನ್ನು ಹಮ್ಮಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯವನ್ನು ನಿರ್ವಹಿಸಬೇಕು. ಸಾರ್ವತ್ರಿಕ ಚುನಾವಣೆ ಕೂಡ ಇರುವುದರಿಂದ ಎಲ್ಲರೂ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು ಇಲ್ಲದಿರುವುದು ಕಂಡುಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯತಿಯಲ್ಲಿ ಕುಡಿಯುವ ನೀರಿಗೆ ಸಂಬಂಧ ಪಟ್ಟಂತೆ ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ನೇರವಾಗಿ ಈ ಪರಿಹಾರ ದೂರವಾಣಿ 9480985555 ಸಂಖ್ಯೆಗೆ ಸಂಪರ್ಕ ಮಾಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ