
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಸ್ತುತ ಕೋವಿಡ್-19ರ ನಿಮಿತ್ಯ ಜನತಾ ಕರ್ಫ್ಯೂ ಜಾರಿಯಲ್ಲಿರುವುದರಿಂದ ಬೆಳಗಾವಿ ನಗರದ ಎಲ್ಲ ವಾರ್ಡ್‍ಗಳಲ್ಲೂ ತರಕಾರಿ/ಹಣ್ಣು/ಹೂವು ಮಾರಾಟ ಮಾಡಲು ತೋಟಗಾರಿಕೆ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಜಿಲ್ಲಾ ಹಾಪ್‍ಕಾಮ್ಸ್, ರೈತ ಉತ್ಪಾದಕ ಸಂಸ್ಥೆ ಹಾಗೂ ರಫ್ತುದಾರರಿಂದ ವ್ಯವಸ್ಥೆ ಮಾಡಲಾಗುತ್ತಿದ್ದು, ಪ್ರತಿಯೊಂದು ವಾರ್ಡಗಳಲ್ಲಿ ಸಂಚರಿಸಲು ಅನುಕೂಲ ಮಾಡಿಕೊಡಲಾಗುತ್ತಿದೆ.
ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ತರಕಾರಿಗಳನ್ನು ಖರೀದಿಸಬಹುದಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ವಾರ್ಡವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಆಯಾ ವಾರ್ಡುಗಳಿಗೆ ತರಕಾರಿ ವಾಹನ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಾರೆ ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ