
ಪ್ರಗತಿವಾಹಿನಿ ಸುದ್ದಿ; ಶಿರಸಿ: ಕರಡಿ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ನಡೆದಿದೆ.
ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿ.
ಗದ್ದೆಗೆ ಹೋಗಿ ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ ಮೃತಪಟ್ಟಿರುವುದು ಕಂಡು ಬಂದಿದೆ.
ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿರೋ ಕುಟುಂಬಸ್ಥರು ಗ್ರಾಮಸ್ಥರು. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ