ಪ್ರಗತಿವಾಹಿನಿ ಸುದ್ದಿ: ಆಂದ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಬಸ್ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದ್ದು ಒಂದು ಕಡೆಯಾದರೆ ಈ ಘಟನೆಯಲ್ಲಿ ನೆಲ್ಲೂರು ಜಿಲ್ಲೆಯ ಮಿಂಜಾಮುರ್ ಮಂಡಲದ ಗೊಲ್ಲವರಿಪಲ್ಲಿಯ ಒಂದೇ ಕುಟುಂಬದ ನಾಲ್ವರು ಕೂಡಾ ಸಾವನ್ನಪ್ಪಿದ್ದಾರೆ.
ವಿಂಜಾಮೂರ್ ಮಂಡಲದ ಗೊಲ್ಲವರಿಪಳ್ಳಿಯ ಗೊಲ್ಲ ರಮೇಶ್ (35), ಅನುಷಾ (30), ಮಾನ್ವಿತಾ (10) ಮತ್ತು ಮನೀಶ್ (12) ಸಾವನ್ನಪ್ಪಿದವರು.
ರಮೇಶ್ ಕಳೆದ 15 ವರ್ಷಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಕಂಪನಿಯ ಪ್ರವಾಸದ ಭಾಗವಾಗಿ ಕುಟುಂಬ ಸದಸ್ಯರೊಂದಿಗೆ ಹೈದರಾಬಾದ್‌ಗೆ ಬಂದಿದ್ದರು. ಹಿಂದಿರುಗುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.




