
ಪ್ರಗತಿವಾಹಿನಿ ಸುದ್ದಿ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಅವರ ಮೂಗಿನಿಂದ ರಕ್ತ ಸೋರಿಕೆಯಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಈ ಹಿಂದೆ ಸ್ಟೋಕ್, ಹೃದಯ ಶಸ್ತ್ರ ಚಿಕಿತ್ಸೆ ಆಗಿದ್ದರಿಂದ ರಕ್ತ ಹೆಪ್ಪು ಕಟ್ಟದಂತೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರು. ಇದರಿಂದಾಗಿ ಅವರಿಗೆ ರಕ್ತಸ್ರಾವವಾಗಿರಬಹುದು ಎಂದು ಜಯನಗರದ ಅಪೊಲೊ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆಂದು ವರದಿಯಾಗಿದೆ.
ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಗತ್ಯ ಪರೀಕ್ಷೆಗಳ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ ಎಂದೂ ವೈದ್ಯರು ಹೇಳಿದ್ದಾರೆ.
ಯಾರೂ ಆತಂತಕ್ಕೆ ಒಳಗಾಗದಿರಿ: ನಿಖಿಲ ಕುಮಾರಸ್ವಾಮಿ
ಹಲವು ತಿಂಗಳುಗಳಿಂದ ನಿರಂತರವಾಗಿ ಕುಮಾರಸ್ವಾಮಿ ಅವರು ದಣಿದಿದ್ದಾರೆ. ಕೇಂದ್ರ ಸಚಿವರಾದ ಮೇಲೆ ಹೆಚ್ಚು ಕೆಲಸದ ಒತ್ತಡ, ಓಡಾಟವಾಗಿದೆ. ಕುಮಾರಣ್ಣ ಮೇಲೆ ತಂದೆ-ತಾಯಿ ಆಶೀರ್ವಾದವಿದೆ. ಅವರಿಗೆ 3ನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಸದ್ಯ ಕ್ಷೇಮವಾಗಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ನಿಖಿಲ್ ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ