Latest

ಬಿಜೆಪಿ ಶಾಸಕರ ಆಪ್ತನ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಎನ್ನಲಾದ ಬಾಬು ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಡ್ ಬ್ಲಾಕಿಂಗ್ ಹಗರಣದಲ್ಲಿ ಈ ಹಿಂದೆ ಬಾಬುರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊರೊನಾ ಕಾರಣ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗುತ್ತಿದ್ದಂತೆ ಸಿಸಿಬಿ ಪೊಲೀಸರು ಬಾಬುರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡೆಸಿ, ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆದುಕೊಂಡಿದೆ.

ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಮೊದಲು ಬಂಧನಕ್ಕೀಡಾಗಿದ್ದ ಮಹಿಳೆ, ಬಾಬು ಮೂಲಕ ಬೆಡ್ ಬ್ಲಾಕ್ ಮಾಡಿಸುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಬಂಧಿತ ಬಾಬು ಶಾಸಕ ಸತೀಶ್ ರೆಡ್ಡಿಯವರ ಆಪ್ತ ಎಂದು ಹೇಳಲಾಗುತ್ತಿದೆ.
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್; ಕೋವಿಡ್ ನಿಂದ ಗುಣಮುಖರಾದ ಹಿರಿಯ ನಟ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button