Latest

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ಡ್ರೆಸ್ ಕೋಡ್ ಗೊತ್ತಾ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು ಮಾರ್ಚ್ ಮಧ್ಯಭಾಗದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಿದೆ.

ಮಾರ್ಚ್ 12ರಿಂದ 16ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು. ಆದರೆ ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಬ್ಲೂಟೂತ್, ಕೈ ಗಡಿಯಾರ, ಕ್ಯಾಲ್ಕುಲೇಟರ್, ಆಹಾರ ಪದಾರ್ಥ, ವಾಲೆಟ್, ಅಲಂಕಾರಿಕ ವಸ್ತುಗಳು, ಬೆಲ್ಟ್, ಟೋಪಿ, ಪೆನ್ಸಿಲ್, ಕಾಗದ, ಆಭರಣ, ಸ್ಟೇಷನರಿ ವಸ್ತುಗಳನ್ನು ನಿಷೇಧಿಸಲಾಗಿದೆ.

ಅಭ್ಯರ್ಥಿಗಳಿಗೆ ಕೋವಿಡ್ ಮಾರ್ಗಸೂಚಿ ಅನ್ವಯ ವಸ್ತ್ರ ಸಂಹಿತೆ ಕಡ್ಡಾಯವಾಗಿದ್ದು, ಪುರುಷ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆತೋಳಿನ ಅಂಗಿ ಹಾಗೂ ಸಾದ ಅಪ್ಯಾಂಟ್ ಹಾಗೂ ಚಪ್ಪಲಿ ಕಡ್ಡಾಯ. ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆ ತೋಳಿನ ಉಡುಪುಗಳನ್ನು ಸೂಚಿಸಲಾಗಿದೆ. ಸಾದಾ ಬಾಟಲಿನಲ್ಲಿ ಕುಡಿಯುವ ನೀರು ತೆಗೆದುಕೊಂಡು ಬರಲು ಅವಕಾಶ ನೀಡಲಾಗಿದೆ.

Home add -Advt

ತವರಿಗೆ ವಾಪಸ್ ಆದ ಕರ್ನಾಟಕದ ವಿದ್ಯಾರ್ಥಿಗಳು: ಕೆಐಎ ವಿಮಾನ ನಿಲ್ದಾಣದಲ್ಲಿ ಪೋಷಕರ ಸಂಭ್ರಮಾಚರಣೆ

Related Articles

Back to top button