Belagavi NewsBelgaum NewsKarnataka NewsLatest
*ಬೆಳಗಾವಿಯಲ್ಲಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಜನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್ ಗೆ ಲಾರಿ ತುಂಬಿಕೊಂಡು ಗೋಮಾಂಸ ಸಾಗಿಸುತ್ತಿರುವ ಮಾಹಿತಿ ಪಡೆದ ಸಾರ್ವಜನಿಕರು ಐನಾಪುರ ಗ್ರಾಮದ ಉಗಾರ ರಸ್ತೆಯ ಶ್ರೀ ಸಿದ್ದೇಶ್ವರ ಗುಡಿ ಹತ್ತಿರ ರಾತ್ರಿ ಸೋಮವಾರ ರಾತ್ರಿ ಲಾರಿ ತಡೆ ಹಿಡಿದು, ಲಾರಿಗೆ ಬೆಂಕಿ ಹಚ್ಚಿದ್ದಾರೆ
ಲಾರಿ ತಡೆ ಹಿಡಿದ ಸಾರ್ವಜನಿಕರು ಪರಿಶೀಲಿಸಿದಾಗ ಅಪಾರ ಪ್ರಮಾಣದಲ್ಲಿ ಗೋಮಾಂಸ ಇರುವುದು ಕಂಡುಬಂದಿದೆ. ಆಗ ರೊಚ್ಚಿಗೆದ್ದ ಸಾರ್ವಜನಿಕರು ಲಾರಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಪೊಲೀಸರು ಬರುವಷ್ಟರಲ್ಲಿ ಲಾರಿ ಬೆಂಕಿಗಾಹುತಿಯಾಗಿದೆ. ಲಾರಿಯಲ್ಲಿ ಸುಮಾರು ಐದು ಟನ್ ಗೂ ಹೆಚ್ಚು ಗೋಮಾಂಸ ಇತ್ತು ಎಂದು ಅಂದಾಜಿಸಲಾಗಿದೆ.
ಉಗಾರ ಸಕ್ಕರೆ ಕಾರ್ಖಾನೆ ಹಾಗೂ ಅಥಣಿ ಅಗ್ನಿ ಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದ್ದು, ಕಾಗವಾಡ ಪೊಲೀಸ್ ಪಿಎಸ್ ಐ ರಾಘವೇಂದ್ರ ಖೋತ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.