ಪ್ರಗತಿವಾಹಿನಿ ಸುದ್ದಿ; ಶಿರಸಿ: ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಕ್ಕಿ ಆಲೂರು ಮೂಲದ ಮಹ್ಮದ್ ಸಲಿಂ ತಂದೆ ಮಾಬುಸಾಬ ಬೇಪಾರಿ ಹಾಗೂ ಭಾಷಾಸಾಬ ತಂದೆ ಅಬ್ದುಲ್ ಖಾದರಸಾಬ ಬಹದ್ದೂರ ಎಂದು ಗುರುತಿಸಲಾಗಿದೆ.
ಆರೋಪಿಗಳು ಇಂದು ಬೆಳಿಗ್ಗೆ ಅಕ್ರಮವಾಗಿ ಗೋಮಾಂಸವನ್ನು ಮಾರಾಟ ಮಾಡಲು ಶಿರಸಿ ನಗರದ ಕರಿಗುಂಡಿ ರಸ್ತೆಯಲ್ಲಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಅಧೀಕ್ಷಕ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬದರಿನಾಥ, ಪೊಲೀಸ್ ಉಪಾಧೀಕ್ಷಕ ಗೋಪಾಲಕೃಷ್ಣ ನಾಯಕ ವೃತ್ತ ನಿರೀಕ್ಷಕ ಬಿ.ಯು ಪ್ರದೀಪ್ ಮಾರ್ಗದರ್ಶನದಲ್ಲಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದ ಸಿಬ್ಬಂದಿಗಳಾದ ಚಿದಾನಂದ ನಾಯ್ಕ, ಹನುಮಂತ ಮಾಕಾಪುರ, ಮೋಹನ ನಾಯ್ಕ ರವರನ್ನು ಒಳಗೊಂಡ ತಂಡ ಈ ದಾಳಿ ನಡೆಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿದೆ.
ಬಂಧಿತರಿಂದ ಸುಮಾರು 4950 ರೂ ಮೌಲ್ಯದ 16 ಕೆ.ಜಿ ಗೋಮಾಂಸ, 3300 ರೂ ನಗದು ಹಣ ಹಾಗೂ ಕೃತ್ಯಕ್ಕೆ ಬಳಸಲಾದ 2 ಮೊಬೈಲ್ ಗಳು ಮತ್ತು ಅಂದಾಜು 3೦,೦೦೦ ರೂ ಮೌಲ್ಯದ ಸ್ಪ್ಲೆಂಡರ್ ಬೈಕನ್ನು ಜಪ್ತಿ ಮಾಡಲಾಗಿದೆ. ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ