Cancer Hospital 2
Beereshwara 36
LaxmiTai 5

*ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದ ಶ್ರೀರಾಮಸೇನೆ ಕಾರ್ಯಕರ್ತರು; ರೊಚ್ಚಿಗೆದ್ದು ಕಾರಿಗೆ ಬೆಂಕಿಯಿಟ್ಟು ಆಕ್ರೋಶ*

Anvekar 3

ಪ್ರಗತಿವಾಹಿನಿ ಸುದ್ದಿ; ದೊಡ್ಡಬಳ್ಳಾಪುರ: ವಾಹನಗಳಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದ ಶ್ರೀರಾಮಸೇನೆ ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

7ಕ್ಕೂ ಹೆಚ್ಚು ಗೂಡ್ಸ್ ವಾಹನಗಳಲ್ಲಿ 15 ಟನ್ ಗೋಮಾಂಸವನ್ನು ಹಿಂದೂಪುರ, ಯಲಹಂಕ ಮಾರ್ಗವಾಗಿ ಬೆಂಗಳೂರಿನತ್ತ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ಮಾರ್ಗ ಮಧ್ಯೆ ಗೂಡ್ಸ್ ವಾಹನಗಳನ್ನು ತಡೆದಿದ್ದಾರೆ.

Emergency Service

ಈ ವೇಳೆ ಗೋಮಾಂಸ ಸಾಗಿಸುತ್ತಿದ್ದ ವಾಹನ ಚಾಲಕ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ರೊಚ್ಚಿಗೆದ್ದ ಶ್ರೀರಾಮಸೇನೆ ಕಾರ್ಯಕರ್ತರು ಕಾರೊಂದಕ್ಕೆ ಬೆಂಕಿ ಹಚ್ಚಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. 7 ವಾಹನಗಳಲ್ಲಿ ಗೋಮಾಂಸವನ್ನು ಈ ರೀತಿ ಸಾಗಾಟ ಮಾಡುತ್ತಿದ್ದರೂ ಪೊಲೀಸರು, ಸರ್ಕಾರ ಕಣ್ಮುಚ್ಚಿ ಕುಳಿತಿರುವುದು ಯಾಕೆ ಎಂದು ಶ್ರೀರಾಮಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Bottom Add3
Bottom Ad 2