Belagavi NewsBelgaum NewsKarnataka News

*ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣ ಜಪ್ತಿ*

ಸಿಸಿಬಿ ಪೊಲೀಸರ ಕಾರ್ಯಾಚರಣೆ


ಪ್ರಗತಿವಾಹಿನಿ ಸುದ್ದಿ:
ಬೆಳಗಾವಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಮಹಾರಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಗೆ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿಯ ಸಚಿನ್ ಮೇನಕುದಳೆ ಹಾಗೂ ಮಹಾರಾಷ್ಟ್ರದ ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ.

ಬೆಳಗಾವಿ ಪೊಲೀಸ್ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ನಂದೀಶ್ವರ್ ಕುಂಬಾರ ಹಾಗೂ ತಂಡ ಸಾಂಗ್ಲಿಯಿಂದ ಹುಬ್ಬಳ್ಳಿಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವನು ತಡೆದು ಪರಿಶೀಲನೆ ನಡೆಸಿದಾಗ ಸೂಕ್ತ ದಾಖಲೆಗಳಿಲ್ಲದೇ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ತಕ್ಷಣ ವಾಹನದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು, 2,73,27,500 ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ಹಣ ಸಾಗಣೆ ಮಾಡಲೆಂದೇ ಗೂಡ್ಸ್ ವಾಹನದ ಕ್ಯಾಬಿನ್ ನಲ್ಲಿ ಮಾರ್ಪಾಡು ಮಾಡಿರುವುದು ಕಂಡುಬಂದಿದೆ.

ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button