Latest

*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಟ್ರೈನಿ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಬಿಇಎಲ್ ನಲ್ಲಿ ಖಾಲಿ ಹುದ್ದೆಗಳಿಗೆ ನವೆಂಬರ್ 9ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:
ಟ್ರೈನಿ ಇಂಜಿನಿಯರ್-23
ಪ್ರಾಜೆಕ್ಟ್ ಇಂಜಿನಿಯರ್-54

ಭಾರತದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಬಿಎಸ್ ಸಿ, ಬಿ.ಇ ಹಾಗೂ ಬಿ.ಟೆಕ್ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಟ್ರೈನಿ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿ 28 ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಆರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿ 32 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಸಲಾಗುವುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button