ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬೆಳಗಾವಿಯ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ ( railway over bridge ) ಅಕ್ಟೋಬರ್ 12 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಬೃಹತ್ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಹಾಗೂ ಸಂಸದರಾದ ಮಂಗಲಾ ಅಂಗಡಿ ಅವರು ಮೇಲ್ಸೇತುವೆ ಉದ್ಘಾಟಿಸಲಿದ್ದಾರೆ.
ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನೀಲ್ ಬೆನಕೆ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಚನ್ನರಾಜ ಹಟ್ಟಿಹೊಳಿ, ಪ್ರಕಾಶ ಹುಕ್ಕೇರಿ, ಡಾ. ಸಾಬಣ್ಣ ತಳವಾರ ನೈಋತ್ಯ ರೈಲ್ವೇ ಅಧಿಕಾರಿಗಳು, ಜಿಲ್ಲಾಡಳಿತದ ಅಧಿಕಾರಿಗಳು, ಗಣ್ಯರು ಉಪಸ್ಥಿತರಿರುತ್ತಾರೆ.
ಸುಮಾರು 27 ಕೋಟಿ ರೂ. ವೆಚ್ಚದ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ ಕಾಮಗಾರಿ 2019 ರಲ್ಲಿ ಪ್ರಾರಂಭಗೊಂಡಿತ್ತು. ಅಂದಿನ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಅವರು ಶಂಕು ಸ್ಥಾಪನೆ ನೆರವೇರಿಸಿದ್ದರು. 2020 ರ ಮಾರ್ಚ್ ಅಂತ್ಯಕ್ಕೆ ಮುಗಿಯಬೇಕಿದ್ದ ಕಾಮಗಾರಿ ವಿವಿಧ ಕಾರಣಗಳಿಂದಾಗಿ ವಿಳಂಬವಾಯಿತು. ಸಧ್ಯ 4 ಲೇನ್‌ಗಳ ಪೈಕಿ 2 ಲೇನ್‌ಗಳ ಮೇಲ್ಸೇತುವೆ ಮಾತ್ರ ಮುಕ್ತಾಯಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ.
https://pragati.taskdun.com/belgaum-news/no-personal-loyalty-only-party-loyalty-b-l-santhoshs-ears/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ