Kannada NewsLatest

ಬೆಳಗಾವಿ: ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶಾಲೆಯ ಹಳೆ ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ವಿದ್ಯಾರ್ಥಿನಿ ಶಾಲೆಯನ್ನು ಬಿಟ್ಟು ಕಾಲೇಜಿಗೆ ಸೇರಿದ್ದರೂ ವಿದ್ಯಾರ್ಥಿನಿ ಸಂಪರ್ಕಕ್ಕೆ ಬಂದ ಶಿಕ್ಷಕ ಆಕೆಯನ್ನು ಪುಸಲಾಯಿಸಿ ದೈಹಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ಯುವತಿಗೆ ಬೇರೊಂದು ಯುವಕನೊಂದಿಗೆ ಮದುವೆ ನಿಶ್ಚಯವಾಗುತ್ತಿದ್ದಂತೆ ಯುವತಿ ಜತೆಗಿನ ಕೆಲ ಖಾಸಗಿ ಫೋಟೋಗಳನ್ನು ವಾಟ್ಸಪ್ ನಲ್ಲಿ ಹರಿಬಿಟ್ಟಿದ್ದಾನೆ.

Home add -Advt

ಫೋಟೊ ವೈರಲ್ ಆಗುತ್ತಿದ್ದಂತೆ ದೈಹಿಕ ಶಿಕ್ಷಕನ್ನು ಹಿಡಿದ ಕುಟುಂಬದವರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಯುವತಿ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ಆಭರಣಗಳ ಬೆಲೆಯಲ್ಲಿ ಮತ್ತಷ್ಟು ಏರಿಕೆ

Related Articles

Back to top button