Belagavi NewsBelgaum NewsKannada NewsKarnataka NewsLatest

*ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಬೆಳಗಾವಿ ಬಳಿ ಪಲ್ಟಿ: 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ನಡೆಯುತ್ತಿರುವ ವಿಶ್ವ ರೈತ ಸಮಾವೇಶದಲ್ಲಿ ಭಾಗವಹಿಸಲು ತೆರಳುತ್ತಿದ್ದ ವಾಹನ ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರ ಬೆನ್ನು, ಕೈ-ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಲಹೊಂಗಲದ ಗರಜೂರ ಗ್ರಾಮದ ರೈತರು, ಮಹಿಳೆಯರು ಮೈಸೂರಿನಲ್ಲಿ ನಡೆಯುತ್ತಿದ್ದ ಸಮಾವೇಶಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿ ಬಿದ್ದಿದೆ. ಬೈಲಹೊಂಗಲ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button