Belagavi NewsBelgaum NewsKannada NewsKarnataka NewsLatest
*ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ: ಬಾಲಕಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ವೈಷ್ಣವಿ ತೇರದಾಳ (9) ಮೃತ ಬಾಲಕಿ. ಶಿಕ್ಷಣ ಸಂಯೋಜಕ ವಿಠಲ ತೇರದಾಳೆ ಅವರ ಪುತ್ರಿ.
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.




